ಶ್ರೀ ಸತ್ಯನಾರಾಯಣ ಪೂಜೆ, ನರಸಿಂಹ ಜಯಂತಿ, ವಿಶೇಷ ಭಜನೆ- ಅಭಿನಂದನಾ ಕಾರ್ಯಕ್ರಮ
ಕಾಣಿಯೂರು: ಕಾಣಿಯೂರು ಶ್ರಿ ಲಕ್ಷ್ಮೀನರಸಿಂಹ ಭಜನಾ ಮಂಡಳಿ, ಸುವರ್ಣ ಮಹೋತ್ಸವ ಸಮಿತಿ 2024-25 ಇದರ ಆಶ್ರಯದಲ್ಲಿ ಶ್ರಿ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ 50ನೇ ವರ್ಷಾಚರಣೆಯ ಪ್ರಯುಕ್ತ ಸುವರ್ಣ ಸಂಭ್ರಮ, 49ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ನರಸಿಂಹ ಜಯಂತಿ, ವಿಶೇಷ ಭಜನಾ ಕಾರ್ಯಕ್ರಮ, ಅಭಿನಂದನಾ ಕಾರ್ಯಕ್ರಮವು ಮೇ.11ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಅಗಳಿ ಶ್ರೀ ಸದಾಶಿವ ಮಕ್ಕಳ ಕುಣಿತ ಭಜನಾ ತಂಡ, ಮೂವಪ್ಪೆ ಕಲ್ಪಡ ಧರ್ಮಶ್ರೀ ಮಕ್ಕಳ ಕುಣಿತಾ ಭಜನಾ ತಂಡ, ಕಾಣಿಯೂರು ಶ್ರೀ ಅಮ್ಮನವರು ಮಹಿಳಾ ಕುಣಿತ ಭಜನಾ ತಂಡ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಮಹಿಳಾ ಮತ್ತು ಮಕ್ಕಳ ಕುಣಿತ ಭಜನಾ ತಂಡ, ಸದಾನಂದ ಆಚಾರ್ಯ ಕಾಣಿಯೂರು ತರಬೇತುಗೊಳಿಸಿದ ಭಜನಾ ತಂಡದ ಸದಸ್ಯರಿಂದ ವಿಶೇಷ ಕುಣಿತ ಭಜನೆ ನಡೆಯಲಿದೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ವಹಿಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜೀ ಆಶೀರ್ವಚನ ಮಾಡಲಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಾಮರಸ್ಯ ಟೋಳಿ ಸದಸ್ಯ ಸುರೇಶ್ ಪರ್ಕಳ ಧಾರ್ಮಿಕ ಉಪನ್ಯಾಸ ಮಾಡಲಿದ್ದಾರೆ. ಮಂಗಳೂರು ಸಂಸದ ಕ್ಯಾ| ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಕಾಣಿಯೂರು ಶ್ರೀ ರಾಮತೀರ್ಥ ಮಠದ ವ್ಯವಸ್ಥಾಪಕ ಶ್ರೀನಿಧಿ ಆಚಾರ್ಯ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಹಿರಿಯ ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಕಲಾ ಕೇಂದ್ರ ವೀರಮಂಗಲ, ಕಾಣಿಯೂರು ಇಲ್ಲಿನ ವಿದ್ಯಾರ್ಥಿಗಳಿಂದ ನೃತ್ಯಾರ್ಚನೆ, ಭಕ್ತಿ ಪ್ರಧಾನ ನೃತ್ಯ ರೂಪಕ ಭಸ್ಮಾಸುರ ಮೋಹಿನಿ ಮಕರಜ್ಯೋತಿ ಹಾಗೂ ಕಣ್ವರ್ಷಿ ಕಲಾಸುಮ ತಂಡ ಕಾಣಿಯೂರು ಇವರಿಂದ ರಾಮಾಯಣ -ನೃತ್ಯ ರೂಪಕ ನಡೆಯಲಿದೆ ಎಂದು ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಭಜನಾ ಮಂಡಳಿ ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಕೀರ್ತಿಕುಮಾರ್ ಎಳುವೆ ತಿಳಿಸಿದ್ದಾರೆ.