ಆಲಂಕಾರು ಪ್ರಾ. ಕೃಷಿ ಪ. ಸಹಕಾರ ಸಂಘದ ಚುನಾವಣೆ : ಚುನಾವಣಾಧಿಕಾರಿಯಿಂದ ಅಧಿಕೃತ ಫಲಿತಾಂಶ ಘೋಷಣೆ

0


ಆಲಂಕಾರು: ತೀವ್ರ ಕುತೂಹಲ ಕೆರಳಿಸಿದ್ದ ಆಲಂಕಾರು ಸಹಕಾರ ಸಂಘದ ಚುನಾವಣೆ ಫಲಿತಾಂಶ ಘೋಷಣೆಗೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಪ್ರಕಟಗೊಂಡ ನಂತರ
ಚುನಾವಣಾಧಿಕಾರಿಯವರು ಅಧಿಕೃತ ಪಲಿತಾಂಶ ಘೋಷಣೆ ಮಾಡಿದ್ದಾರೆ.


ಪ್ರತಿಷ್ಠಿತ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗಾಗಿ ಮಾ.2ರಂದು ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಕೋರಿ ಮತದಾರರ ಪಟ್ಟಿಯಲ್ಲಿ ಇಲ್ಲದ ಸಂಘದ 423 ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ 423 ಸದಸ್ಯರಿಗೂ ಮತದಾನಕ್ಕೆ ಅವಕಾಶ ನೀಡಿತ್ತು.ಈ ಹಿನ್ನಲೆಯಲ್ಲಿ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಣೆಗೆ ತಡೆ ನೀಡಿತ್ತು. ಮತದಾನದ ಬಳಿಕ ಮತ ಎಣಿಕೆ ನಡೆದರೂ ಚುನಾವಣಾಧಿಕಾರಿಯವರು ಅಧಿಕೃತವಾಗಿ ಫಲಿತಾಂಶ ಘೋಷಣೆ ಮಾಡಿರಲಿಲ್ಲ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಎ.24ರಂದು ತೀರ್ಪು ಪ್ರಕಟಿಸಿದೆ.


ರಿಟ್ ಅರ್ಜಿ ವಾಪಸ್
ಎ.24ರಂದು ಹೈಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಅನರ್ಹ ಮತದಾರರ ಪರ ವಕೀಲರು ರಿಟ್ ಅರ್ಜಿ ವಾಪಸ್ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಅನುಮತಿ ಪಡೆದು ಚುನಾವಣೆಯಲ್ಲಿ ಮತ ಚಲಾಯಿಸಿದ್ದ ಮತದಾರರ ಮತ ಪರಿಗಣನೆಗೆ ತೆಗೆದುಕೊಳ್ಳದೆ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಅರ್ಹ ಮತದಾರರು ಚಲಾಯಿಸಿದ್ದ ಮತ ಮಾತ್ರ ಪರಿಗಣನೆಗೆ ತೆಗೆದುಕೊಂಡು ಫಲಿತಾಂಶ ಘೋಷಣೆ ಮಾಡುವಂತೆ ಚುನಾವಣಾಧಿಕಾರಿಯವರಿಗೆ ಹೈಕೋರ್ಟ್ ಆದೇಶಿಸಿದೆ.


ಇದರಿಂದಾಗಿ ರಮೇಶ್ ಭಟ್ ಉಪ್ಪಂಗಳ ಸಹಕಾರ ಬಳಗದ 10 ಹಾಗೂ ಸಹಕಾರ ಭಾರತಿಯ ಇಬ್ಬರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಚುನಾವಣಾಧಿಕಾರಿಯವರು ರಮೇಶ್ ಭಟ್ ಉಪ್ಪಂಗಳ ಸಹಕಾರಿ ಬಳಗದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಕೇಶವ ಗೌಡ ಆಲಡ್ಕ, ದಯಾನಂದ ರೈ ಮನವಳಿಕೆ, ರಮೇಶ್ ಯು.ಉಪ್ಪಂಗಳ, ಉದಯ ಸಾಲಿಯಾನ್, ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ರತ್ನಾ ಬಿ.ಕೆ, ಹಿಂದುಳಿದ ಪ್ರವರ್ಗ ಎ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ವಿಜಯ ಎಸ್ ಅಂಬಾ, ಹಿಂದುಳಿದ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಪದ್ಮಪ್ಪ ಗೌಡ ಕೆ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಕುಂಞ ಮುಗೇರ, ಪರಿಶಿಷ್ಠ ಪಂಗಡ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಅಶೋಕ ಪೆರಾಬೆ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಲೋಕೇಶ್ ಕಮ್ಮಿತ್ತಿಲು, ಸಹಕಾರಿ ಭಾರತಿಯ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಅಶೋಕ ಗೋಕುಲನಗರ, ಮಹಿಳಾ ಮೀಸಲು ಸ್ಥಾನದಿಂದ ಸ್ಪರ್ಧಿಸಿದ್ದ ಗಾಯತ್ರಿಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದು, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ದ.ಕ.ಜಿಲ್ಲೆ ಮಂಗಳೂರು ಇಲ್ಲಿನ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ.ರವರು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಮೆ.23 ಶುಕ್ರವಾರ ದಂದು ಬೆಳಿಗ್ಗೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

.

LEAVE A REPLY

Please enter your comment!
Please enter your name here