ಪುತ್ತೂರು: ಭಾರತವು ಪಾಕಿಸ್ಥಾನದ ವಿರುದ್ಧ ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನಲೆಯಲ್ಲಿ ಹಾಗೂ ಯೋಧರ ಸುಕ್ಷೇಮಕ್ಕಾಗಿ ಮೇ.11ರಂದು ಬೆಳಿಗ್ಗೆ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ,ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅರ್ಚಕರಾದ ಯೋಗೀಶ ಕುಂಜಾತಾಯ ಹಾಗೂ ರಮೇಶ್ ಭಟ್ ಇವರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗು ಪ್ರಾರ್ಥನೆ ಇರುತ್ತದೆ. ಈ ವಿಶೇಷ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇಶದ ಏಕತೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪೂಜಾರಿ ಬೆದ್ರಾಳ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಆಪರೇಷನ್ ಸಿಂಧೂರ್ ಯಶಸ್ವಿಯಾಗಿಸಲು ಕೆಮ್ಮಿಂಜೆ ದೇವಸ್ಥಾನದಲ್ಲಿ ಭಕ್ತರಿಂದ ವಿಶೇಷ ಪ್ರಾರ್ಥನೆ