ಪುತ್ತೂರು: ಪದ್ಮನಾಭ ಸಪಲ್ಯ ಇಡ್ಕಿದು ರವರ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಉಜ್ರೆಮಾರ್ ದಯಾನಂದ ಶೆಟ್ಟಿ ಆದೇಶಿಸಿದ್ದಾರೆ.
ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿದ್ಯ ಕೊಡುವ ಪಕ್ಷದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆಗೆ ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ. ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.