ಪುತ್ತೂರು: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ರಾಜ್ಯ ವಕ್ತರಾರದ ಶ್ರೀಪ್ರಸಾದ್ ಪಾಣಾಜೆ ರವರನ್ನು ಚಿಕ್ಕಮಗಳೂರು ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ ಗೌಡ ನೇಮಕ ಮಾಡಿರುತ್ತಾರೆ.
ಪ್ರಸ್ತುತ ಅವರು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಾಣಾಜೆಯ ನಡುಕಟ್ಟ ನಿವಾಸಿಯಾಗಿರುವ ಶ್ರೀಪ್ರಸಾದ್ ಅವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ ಮಾಡಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ವಕ್ತಾರರಾಗಿ ಇವರನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಇತ್ತೀಚೆಗೆ ನೇಮಕ ಮಾಡಿದ್ದರು. ಶ್ರೀಪ್ರಸಾದ್ ಅವರು ಪಾಣಾಜೆ ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಾದವ ಸಭಾ ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದುಕೊಂಡು ಇತ್ತೀಚೆಗಷ್ಟೇ ಆರ್ಲಪದವಿನಲ್ಲಿ ಜಿಲ್ಲಾ ಮಟ್ಟದ ಯಾದವ ಸಮ್ಮೇಳನವನ್ನು ಸಂಘಟಿಸಿದ್ದರು.