ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇಶದ ಹಿತಕ್ಕಾಗಿ ವಿಶೇಷ ಪ್ರಾರ್ಥನೆ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಪರೇಷನ್ ಸಿಂಧೂರದ ಯಶಸ್ಸಿಗಾಗಿ ಮತ್ತು ಭಾರತೀಯ ಸೈನಿಕರ ಶ್ರೇಯಸಿಗಾಗಿ ಹಾಗೂ ದೇಶದ ಹಿತಕ್ಕಾಗಿ ಮೇ.11ರಂದು ಬೆಳಿಗ್ಗೆ 10.30 ವಿಶೇಷ ಪ್ರಾರ್ಥನೆ ನಡೆಯಿತು.


ದೇವಳದ ವ್ಯವಸ್ಥಾಪನಾ ಸಮಿತಿ ವತಿಯಿಂದ ನಡೆದ ಈ ವಿಶೇಷ ಪ್ರಾರ್ಥನೆಯಲ್ಲಿ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here