ವಿಟ್ಲ/ಕಬಕ: ಬಸ್ ಹಾಗೂ ಬೈಕ್ ನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತದುರ್ದೈವಿ, ಅವರ ಪುತ್ರ ಧ್ಯಾನ್ ಗಂಭೀರ ಗಾಯಗೊಂಡಿದ್ದಾರೆ.
ಮಾಣಿ – ಮೈಸೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದೆ.
ಗಾಯಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.