ಕಡಬ: ಸುಬ್ರಹ್ಮಣ್ಯ ಮಠ ಎಜ್ಯುಕೇಶನ್ ಸೊಸೈಟಿ (ರಿ), ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಸಲ್ಪಡುವ ಬಿಳಿನೆಲೆ ಶ್ರೀಗೋಪಾಲ ಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿ ಪೂರ್ಣೇಶ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದು, ಇವರನ್ನು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಶ್ರೀಗಳು ಸನ್ಮಾನಿಸಿ ಗೌರವಿಸಿದರು.
ನರಸಿಂಹ ಜಯಂತಿ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮಠದ ಅನಿರುದ್ಧ ತೀರ್ಥ ವೇದಿಕೆಯಲ್ಲಿ ಜರಗಿದ ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಸನ್ಮಾನಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸುದರ್ಶನ ಜೋಯಿಸ, ಮುಖ್ಯೋಪಾಧ್ಯಾಯ ಸತ್ಯಶಂಕರ, ಪೂರ್ಣೇಶನ ಪೋಷಕರು ಹಾಗೂ ಆಚಾರ್ಯರು ಉಪಸ್ಥಿತರಿದ್ದರು.
ಶ್ರೀ ಸುಬ್ರಹ್ಮಣ್ಯ ಮಠ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
Home ಇತ್ತೀಚಿನ ಸುದ್ದಿಗಳು ಸುಬ್ರಹ್ಮಣ್ಯ: ರಾಜ್ಯಕ್ಕೆ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿಗೆ ಸುಬ್ರಹ್ಮಣ್ಯ ಶ್ರೀಗಳಿಂದ ಸನ್ಮಾನ