ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.
2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.