ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ.13 ರಂದು ವಾರ್ಷಿಕೋತ್ಸವವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್.ಶೆಟ್ಟಿ ಯವರು ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ರವರು ವಾರ್ಷಿಕೋತ್ಸವವು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಒಟ್ಟು ಸೇರಿ ಆಚರಿಸುವಂತಹ ಕಾರ್ಯಕ್ರಮ. ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದರು.
ಅತಿಥಿ ಡೆಪ್ಯೂಟಿ ಸುಪರಿಟೆಂಡೆಂಟ್ ಆಫ್ ಪೋಲೀಸ್ ಬಂಟ್ವಾಳ ಇವರು ಜೀವನದ ಪ್ರತಿಯೊಂದು ಕಾರ್ಯವು ಕಾನೂನು ಬದ್ಧವಾದದ್ದು, ಇದನ್ನು ಅರಿತು ಬಾಳಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.ಇನ್ನೋರ್ವ ಅತಿಥಿ ದುರ್ಗಾಂಬ ಪದವಿಪೂರ್ವ ಕಾಲೇಜು ಅಲಂಕಾರಿನ ಪ್ರಾಂಶುಪಾಲೆ ರೂಪಾ ಜೆ ರೈ ಹೆತ್ತ ತಾಯಿ ಮತ್ತು ಹೊತ್ತ ತಾಯಿ ಸ್ವರ್ಗಕ್ಕಿಂತ ಮೇಲು. ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತನ್ನು ರೂಢಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು.
ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಷ್ಟಿಗಳಾದ ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪುಷ್ಪಾವತಿ, ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ ಯವರು ವಾರ್ಷಿಕ ವರದಿಯನ್ನು ವಾಚಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಪ್ರಥಮ ಬಿಸಿ.ಎ ವಿದ್ಯಾರ್ಥಿಯಾದ ಮಹಮ್ಮದ್ ಅನೀಸ್ ಹಾಗೂ ದ್ವಿತೀಯ ಬಿ.ಎ ವಿದ್ಯಾರ್ಥಿ ದೀಕ್ಷಿತ್ ಮಾಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಲೀಮತ್ ಸಝಾನ ನಿರೂಪಸಿದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.