ಪುತ್ತೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೇ.13 ರಿಂದ 19ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು. ಮೇ.15ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ.14ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಮೇ 15ರಂದು ವಿಜಯಪುರ, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮೇ 13ರಿಂದ 19ರವರೆಗೆ ಮಳೆಯಾಗಲಿದ್ದು, ಮೊದಲ 2 ದಿನ ಹೊರತು ಪಡಿಸಿ ಉಳಿದ ಎಲ್ಲಾ ದಿನ ವ್ಯಾಪಕ ಮಳೆಯಾಗಲಿದೆ. ಮೇ 13ರಂದು ಚಿತ್ರದುರ್ಗ, ಹಾಸನ, ಕೊಡಗು. ಮೈಸೂರು ಹಾಗೂ ಮೇ 14ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.