ಪುತ್ತೂರು: ಪಡ್ನೂರು ಶ್ರೀಜನಾರ್ದನ ಯುವಕ ಮಂಡಲ ಮತ್ತು ಸರಸ್ವತಿ ಯುವತಿ ಮಂಡಲದ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಕ್ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಮೇ.11ರಂದು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಿಜೆಪಿ ಗ್ರಾಮಾಂತರ ಮಂಡಲದ ನಿಟಕಪೂರ್ವ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಮಾತನಾಡಿ, ಎಲ್ಲಾ ದಾನಗಳಲ್ಲಿ ರಕ್ತದಾನವು ಶ್ರೇಷ್ಠವಾಗಿದೆ. ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸುವಲ್ಲಿ ರಕ್ತವು ಬಹಳಷ್ಟು ಪ್ರಾಮುಖ್ಯವಾಗಿದೆ. ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಿದ ಪುಣ್ಯ ಪ್ರಾಪ್ತಿಯಾಗುತ್ತದ ಎಂದರು.
ಮುಖ್ಯ ಅತಿಥಿಯಾಗಿದ್ದ ಪಡ್ನೂರು ಹಿ.ಪ್ರಾ ಶಾಲಾ ಮುಖ್ಯಗುರು ಜೀವನರಶ್ಮೀ ಮಾತನಾಡಿ, ಯುವಕ, ಯುವತಿ ಮಂಡಲದ ಸಮಾಜ ಸೇವಾ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.
ಬ್ಲಡ್ ಬ್ಯಾಂಕ್ನ ವೈದ್ಯಾಧಿಕಾರಿ ಡಾ.ಸೀತಾರಾಮ ಭಟ್ ರಕ್ತದಾನದ ಮಹತ್ವ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಯುವಕ ಮಂಡಲದ ಗೌರವ ಸಲಹೆಗಾರ ಬಾಲಕೃಷ್ಣ ಜೋಯಿಷ ಯರ್ಮುಂಜ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕುಂಜಾರು ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಸುರೇಂದ್ರ ಆಟಿಕ್ಕು, ಯುವಕ ಮಂಡಲದ ಅಧ್ಯಕ್ಷ ಸುಧಾಕರ ದೇಂತಡ್ಕ, ಯುವತಿ ಮಂಡಲದ ಅಧ್ಯಕ್ಷೆ ಸುಮಿತ್ರ ಮುಂಡಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವತಿ ಮಂಡಲದ ಕಾರ್ಯದರ್ಶಿ ಶ್ವೇತಾ ಬೇರಿಕೆ ಪ್ರಾರ್ಥಿಸಿದರು. ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ದೇಂತಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಜೇಶ್ ಬೇರಿಕೆ ಕಾರ್ಯಕ್ರಮ ನಿರೂಪಿಸಿ, ಮಾಜಿ ಕಾರ್ಯದರ್ಶಿ ಜಗದೀಶ ಆಟಿಕ್ಕು ವಂದಿಸಿದರು. ಸುಮಾರು 25 ಮಂದಿ ಶಿಬಿರದಲ್ಲಿ ರಕ್ತದಾನ ಮಾಡಿದರು.