ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಮದುವೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್‌ನಲ್ಲಿ ಪಲ್ಟಿಯಾದ ಘಟನೆ ಮೇ.13ರಂದು ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ 75ರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತರೇ ವಾಹನ ಸವಾರರು ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.