ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡಲ್ಪಟ್ಟ ಪ್ರಾಜೆಕ್ಟರ್, ಸ್ಕ್ರೀನ್ ಮತ್ತು ಏರ್ ಕೂಲರ್ ಗಳ ಹಸ್ತಾಂತರ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಇಬ್ರಾಹಿಂ.ಕೆ.ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ವೈದ್ಯಾಧಿಕಾರಿ ಡಾ. ಶಶಿಕಲಾ, ವೈದ್ಯರಾದ ಡಾ. ಮನೋಹರ ರೈ, ಪ್ರಮುಖರಾದ ಸಚ್ಚಿದಾನಂದ ಶೆಟ್ಟಿ ಪಾಳ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.