ಮೇ.16: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರಿಗೆ ಭೇಟಿ

0

ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೇ.16ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ, ವೀಕ್ಷಣೆ ನಡೆಸಲಿದ್ದಾರೆ. ಉಳ್ಳಾಲ ಉರೂಸ್‌ಗೆ ಭೇಟಿ ನೀಡಲಿದ್ದಾರೆ.

ಸಂಜೆ 3.15ಕ್ಕೆ ಬಜ್ಪೆಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, 3.35ಕ್ಕೆ ಉರ್ವಮಾರುಕಟ್ಟೆ ಬಳಿಯ ಮಂಗಳೂರು ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ನೆರವೇರಿಸಲಿದ್ದಾರೆ. 4.15ಕ್ಕೆ ಪಡೀಲ್‌ನ ದ.ಕ. ಜಿಲ್ಲಾಧಿಕಾರಿ ನೂತನ ಕಚೇರಿ ‘ಪ್ರಜಾಸೌಧ’ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರಕಾರಿ ಸವಲತ್ತುಗಳ ವಿತರಣೆ ನೆರವೇರಿಸಲಿದ್ದಾರೆ.

ಸಂಜೆ 6.30ಕ್ಕೆ ಉಳ್ಳಾಲದ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾದ ಉರೂಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here