ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೋರ್ಮಂಡರವರು ಮೇ.15ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.
ಮುಖ್ಯ ಅತಿಥಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೌಮ್ಯ ಎಂ.ಎಸ್ ರವರು ಮಾತನಾಡಿ ಮಕ್ಕಳು ಬೇಸಿಗೆ ಶಿಬಿರದಲ್ಲಿ ಸಕ್ರೀಯವಾಗಿ ತೊಡಗಿಸಿ ಕೊಳ್ಳಬೇಕೆಂದು ತಿಳಿಸಿದರು. ಕಾರ್ಯದರ್ಶಿ ಬಾಬು ನಾಯ್ಕ, ಪಂಚಾಯತ್ ಸದಸ್ಯರುಗಳಾದ ಬೇಬಿ ಜಯರಾಮ ಪೂಜಾರಿ, ಚಂದ್ರಶೇಖರ್ ರೈ, ಮೊಯಿದು ಕುಂಞ ಕೋನಡ್ಕ ರವರು ಉಪಸ್ಥಿತರಿದ್ದು, ಶಿಬಿರದ ಸದುಪಯೋಗ ಪಡೆದುಕೊಳ್ಳುವ ಬಗ್ಗೆ ತಿಳಿಸಿದರು. ಪ್ರಥಮ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೀಡಲಾದ ಕಮಾಲ್ ಕಲಿಕಾ ಶಿಬಿರ 2025ರ ಚಟುವಟಿಕೆಗಳೂ ಕೂಡ ನಡೆಸಲಾಯಿತು.
ಕು.ಶ್ವೇತಾ ಪ್ರಾರ್ಥಿಸಿದರು.ಗ್ರಂಥಾಲಯ ಮೆಲ್ವೀಚಾರಕಿ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿ ಕೊಟ್ಟರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಪುನರ್ವಸತಿ ಕಾರ್ಯಕರ್ತೆ ರಾಧಾವತಿ ಸಹಕರಿಸಿದರು.