ಪುತ್ತೂರು: ಕೋಮುದ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನಲೆ ಹಿಂದು ಮುಖಂಡ ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ.15ರಂದು ಸಂಜೆ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್ ಕುಮ್ಡೇಲು ಕೋಮುದೇಷವನ್ನುಂಟು ಮಾಡುವಂತಹ ಭಾಷಣವನ್ನು ಮಾಡಿದ್ದು, ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಭರತ್ ಕುಮ್ಡೇಲು ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.