ಪುತ್ತೂರು: ಸುಳ್ಯ ಮರ್ಕಂಜ ಮೂಲದವರಾಗಿದ್ದು, ಶ್ರೀರಂಗಪಟ್ಟಣದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆಯಾಗಿರುವ ಜೋಸ್ನಾ ಡಿ ಅವರು ಮೇ.16ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಜೋಸ್ನಾ ಡಿ ಅವರು ಬೆಂಗಳೂರಿನಲ್ಲಿ ನ್ಯಾಯಾಧೀಶರಾಗಿದ್ದು, ಅಲ್ಲಿಂದ ಅವರು ಇತ್ತೀಚೆಗೆ ಶ್ರೀರಂಗಪಟ್ಟಣಕ್ಕೆ ವರ್ಗಾವಣೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪುತ್ತೂರಿಗೆ ಬಂದಿದ್ದ ಅವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ನ್ಯಾಯಾಧೀಶರಿಗೆ ದೇವಸ್ಥಾನದ ಗೌರವಾರ್ಥ ಶಲ್ಯ ತೊಡಿಸಿದರು. ಅರ್ಚಕ ಹರೀಶ್ ಭಟ್ ಪ್ರಸಾದ ವಿತರಿಸಿದರು. ಈ ಸಂದರ್ಭ ಚೇತ್ರನಾರಾಯಣ ಸೇಡಿಯಾಪು ಉಪಸ್ಥಿತರಿದ್ದರು. ನ್ಯಾಯಾಧೀಶೆ ಜೋಸ್ನಾ ಡಿ ಅವರು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿದ್ದ ಸಂದರ್ಭ ಅವರು ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ನ್ಯಾಯಾಧೀಶರಾಗಿ ಆಯ್ಕೆಗೊಂಡಿದ್ದರು.