ಬೆಳಿಯೂರುಕಟ್ಟೆ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ರಾಯಲ್ ಗ್ರೂಪ್ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ ಕ್ಯಾನ್ಸರ್ ಕಾಯಿಲೆ ಮುಂಜಾಗ್ರತಾ ತಪಾಸಣೆ ಮತ್ತು ಮಾಹಿತಿ ಶಿಬಿರ ಮೇ.11ರಂದು ಬೆಳೆಯೂರುಕಟ್ಟೆ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.


ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷ ಮುಹಮ್ಮದ್ ಸಾಹೇಬ್, ಮಾಜಿ ಅಧ್ಯಕ್ಷ ಪ್ರಶಾಂತ್ ಶೆಣೈ, ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಡಾ.ಬದ್ರುದ್ದೀನ್, ಉಪ್ಪಿನಂಗಡಿಯ ದಂತ ವೈದ್ಯ ಡಾ.ರಾಜರಾಮ್ ಕೆ.ಬಿ., ಬಲ್ನಾಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್‌ಚಂದ್ರ ಆಳ್ವ, ತಾ.ಪಂ ಮಾಜಿ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಬೆಳಿಯೂರುಕಟ್ಟೆ ಹಿ.ಪ್ರಾ ಶಾಲಾ ಸಂಚಾಲಕ ರಾಧಾಕೃಷ್ಣ, ಮುಖ್ಯಗುರು ಶಾಲಿನಿ, ವಕೀಲ ಪದ್ಮನಾಭ, ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ, ಶಿಬಿರದ ಆಯೋಜಕ ಮಹಮ್ಮದ್ ಶರೀಪ್, ನಿವೃತ್ತ ಮುಖ್ಯಗುರು ಜಯರಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ವಿಭಾಗ, ಶಸ್ತ್ರ ಚಿಕಿತ್ಸಾ, ಚರ್ಮರೋಗ, ಮಕ್ಕಳ ವಿಭಾಗ, ಕಿವಿ ಮೂಗು ಗಂಟಲು, ಕಣ್ಣಿನ ವಿಭಾಗ, ಮೂಳೆ ವಿಭಾಗ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಲ್ಲಿ ತಪಾಸಣೆ, ಚಿಕಿತ್ಸೆ ನಡೆಸಲಾಯಿತು. ಡಾ.ಶ್ರೇಯಾ ಹಾಗೂ ಡಾ.ಅಂಜನ್ ಕ್ಯಾನ್ಸರ್ ಕಾಯಿಲೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಿಬಿರಾರ್ಥಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಸುಮಾರು 200ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here