ಪುತ್ತೂರು: ಮಂಗಳೂರಿನ ಪಡೀಲ್ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಜಾ ಸೌಧದ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುವ ಸಂದರ್ಭ ಸಮಾರಂಭಕ್ಕೆ ಪುತ್ತೂರಿನಿಂದ ತೆರಳುವ ಫಲಾನುಭವಿಗಳಿಗೆ 20 ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದೆ ರೀತಿ ಬಸ್ನಲ್ಲಿ ತೆರಳುವವರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರ ನೇತೃತ್ವದಲ್ಲಿ ಸುಮಾರು 20 ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಬಸ್ನಲ್ಲಿ ತೆರಳುವ ಫಲಾನುಭವಿಗಳಿಗೆ ಊಟದ ವ್ಯವಸ್ಥೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸದಸ್ಯರು ಹಾಗು ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ಅವರು ಮಾಡಿದ್ದಾರೆ. ಗ್ರಾಮಾಂತರ ಬಸ್ಗಳಿಗೆ ಊಟದ ಪೊಟ್ಟಣ ಮಾಡಿ ಕಳುಹಿಸಲಾಗಿದೆ.
