ನಿಡ್ಪಳ್ಳಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಬೆಟ್ಟಂಪಾಡಿ ಇಲ್ಲಿಯ ಪತ್ತನಾಜೆ ಜಾತ್ರೆ ಮೇ.24 ರಂದು ನಡೆಯಲಿದ್ದು, ಗೊನೆ ಮುಹೂರ್ತ ಕಾರ್ಯಕ್ರಮ ಮೇ.17 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಭಟ್ ಪ್ರಾರ್ಥಿಸಿದರು. ಸಹಾಯಕ ಪ್ರಸನ್ನ ಭಟ್, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಶಿವಗಿರಿ ಬೀಡು, ಮೊಕ್ತೇಸರ ವಿನೋದ್ ರೈ ಗುತ್ತು, ಕಚೇರಿ ಸಹಾಯಕ ವಿನಯ ಕುಮಾರ್ ಉಪಸ್ಥಿತರಿದ್ದರು.