ಬಂಟ್ವಾಳ: ಬಂಟ್ವಾಳ ತಾಲೂಕು ಕಛೇರಿಯಲ್ಲಿ ಮೇ.26 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮೇ.26 ರಂದು ಭೇಟಿ ನೀಡಲಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.
ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ. ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.
ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಪ್ರಭಾರ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು.