ವಿಟ್ಲ: ಕನ್ಯಾನ – ವಿಟ್ಲ ರಸ್ತೆಯ ಕಾಂತಡ್ಕ ಎಂಬಲ್ಲಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನಾರ್ ಗಾಯಗೊಂಡವರಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ