ದ್ವಿತೀಯ ಪಿಯುಸಿ ಫಲಿತಾಂಶ : ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ರಾಜ್ಯಕ್ಕೆ 4ನೇ ಸ್ಥಾನ

0

ಕಾಣಿಯೂರು: ಕಾಣಿಯೂರು ಸ.ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೀವಿದ್ಯಾ ಯನ್ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನವನ್ನು ಪಡೆದಿರುತ್ತಾರೆ.

ಪರೀಕ್ಷೆ -1ರಲ್ಲಿ ಗಣಿತದಲ್ಲಿ 98 ಅಂಕಗಳನ್ನು ಪಡೆದಿದ್ದ ಇವರು ಪರೀಕ್ಷೆ-2ರಲ್ಲಿ 100 ಅಂಕಗಳನ್ನು ಪಡೆಯುವ ಮೂಲಕ ಈ ಸಾಧನೆಯನ್ನು ಮಾಡಿರುತ್ತಾರೆ. ಇವರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ನಾರಾಯಣ ಭಟ್ ಮತ್ತು ಶೈಲಶ್ರೀ ದಂಪತಿಗಳ ಪುತ್ರಿ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಜಯಂತಿ ಕೆ ಹಾಗೂ ಉಪನ್ಯಾಸಕರು ಅಭಿನಂದಿಸಿದರು.

LEAVE A REPLY

Please enter your comment!
Please enter your name here