ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಕಲೆಂಬಿ ಗುಳಿಗಗುರಿಯಲ್ಲಿ ಮೇ. 13ರಂದು ನಡೆದ ಪಂಜುರ್ಲಿ ಮತ್ತು ಗುಳಿಗ ದೈವದ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯೆ ಪ್ರವೀಣ ರೈ ಮರುವಂಜ ಮತ್ತು ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಮೇ. ೧೨ರಂದು ಸ್ಥಳ ಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ದೈವಗಳ ಶೈಯ್ಯಾಧೀವಾಸ ನಡೆಯಿತು. ಮೇ.13ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾ ಹೋಮ, ಶಿಖರ ಪ್ರತಿಷ್ಠೆ, ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು.
ಪಂಜುರ್ಲಿ ಮತ್ತು ಗುಳಿಗ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ, ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಶೇಖರ ಓಜಾಲ, ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇಶವ ಪೂಜಾರಿ ಪೆಲತ್ತಡಿ, ಕೃಷ್ಣ ಪೂಜಾರಿ ಸವಣೂರು, ಶ್ರೀಪಂಜುರ್ಲಿ ಮತ್ತು ಗುಳಿಗ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಉಪಾಧ್ಯಕ್ಷ ರಮೇಶ್ ಭಟ್ ಮಿತ್ತೂರು, ಕಾರ್ಯದರ್ಶಿ ವೀಕ್ಷತ್ ಮತ್ತಿತರರು ಉಪಸ್ಥಿತರಿದ್ದರು.