ಪುತ್ತೂರು: ದರ್ಬೆ ಸಂತ ಫಿಲೋಮಿನಾ(ಸ್ವಾಯತ್ತ) ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ವಾಲಿಬಾಲ್ ಲೀಗ್ ಪಂದ್ಯಾಟವನ್ನು ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಏರ್ಪಡಿಸಲಾಗುತ್ತಿದ್ದು, ಎಸ್.ಪಿ.ವಿ.ಸಿ ಸೀಸನ್-1 ರ ಉದ್ಘಾಟನಾ ಕಾರ್ಯಕ್ರಮ ಮೇ 19 ರಂದು ಕಾಲೇಜು ಕ್ರೀಡಾಂಗಣದಲ್ಲಿ ನೆರವೇರಲಿದೆ.
ಕ್ರೀಡೆಯ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊರವರು ವಹಿಸಿಕೊಳ್ಳಲಿದ್ದಾರೆ. ಪುತ್ತೂರು ಎ.ಎಂ.ಆರ್ ಸ್ಪೋರ್ಟ್ಸ್ ವೇರ್ಸ್ ಮಾಲಕ ಹಾಗೂ ಕಾಲೇಜು ಹಿರಿಯ ವಿದ್ಯಾರ್ಥಿ, ವಾಲಿಬಾಲ್ ಪಟು ಆಗಿರುವ ಪ್ರದೀಪ್ ರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊರವರು ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಪುತ್ತೂರು ನಗರಸಭೆ ಉಪಾಧ್ಯಕ್ಷ ಕೆ.ಬಾಲಚಂದ್ರರವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ|ಎಲ್ಯಾಸ್ ಪಿಂಟೊ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೆಕ್ಸನ್ ಫೆರ್ನಾಂಡೀಸ್, ಕ್ರೀಡಾ ಕಾರ್ಯದರ್ಶಿ ಅನ್ವೇಶ್ ರೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.