ಕೌಕ್ರಾಡಿ ಒಕ್ಕೂಟದ ಮಾಸಿಕ ಸಭೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡರವರ ಅಧ್ಯಕ್ಷತೆಯಲ್ಲಿ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಭೆಯಲ್ಲಿ ಕೌಕ್ರಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ನಮಿತಾ ಎಸ್ ಶೆಟ್ಟಿ ಉಪಸ್ಥಿತರಿದ್ದು ತಂಡದ ಸದಸ್ಯರಿಗೆ ಮಾಹಿತಿ ನೀಡಿದರು. ಒಕ್ಕೂಟದ ಸದಸ್ಯರಾದ ಕೆ.ಪಿ.ಸುಗಂಧಿಯವರ ಮನೆಗೆ ಹಾಗೂ ಕೃಷಿಗೆ ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿದ್ದು ಸಹಾಯಧನಕ್ಕೆ ಅವರು ಮನವಿ ನೀಡಿದ್ದು, ಕ್ಷೇತ್ರದಿಂದ ಮಂಜೂರಾದ ರೂ.5 ಸಾವಿರ ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡರವರು ವಿತರಿಸಿದರು.


ಈ ಸಂದರ್ಭದಲ್ಲಿ ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ಸೇವಾ ಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಈ ದಿನದ ಸಭೆಯ ಜವಾಬ್ದಾರಿಯನ್ನು ಅನುಗ್ರಹ ತಂಡದ ಸದಸ್ಯರು ವಹಿಸಿಕೊಂಡಿದ್ದು, ಸದಸ್ಯರಾದ ಅಬ್ದುಲ್ ನಝೀರ್ ಸ್ವಾಗತಿಸಿದರು. ಸುಲೈಮಾನ್ ವಂದಿಸಿದರು.

LEAVE A REPLY

Please enter your comment!
Please enter your name here