ಪುತ್ತೂರು: ಕಲಾಪ್ರತಿಭೆಗಳನ್ನು ಪೋಷಿಸುವುದರ ಮೂಲಕ ಹೆಚ್ಚಿನ ಪ್ರತಿಭೆಗಳ ಸಕ್ರೀಯತೆಗೆ ಮರ್ಕಝುಲ್ ಹುದಾ ತೊಡಗಿಸಿಕೊಂಡಿದೆ ಎಂದು ಮರ್ಕಝುಲ್ ಹುದಾ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಡಾ.ಎಂಎಸ್ಎಂ ಅಬ್ದುಲ್ ರಶೀದ್ ಝೈನಿ ಕಾಮಿಲ್ ಹೇಳಿದರು.
ಕುಂಬ್ರ ಮರ್ಕಝುಲ್ ಹುದಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಅರಿಯಡ್ಕ, ಕೋಶಾಧಿಕಾರಿ ಯೂಸುಫ್ ಗೌಸಿಯಾ ಸಾಜ, ಸದಸ್ಯ ಯೂಸುಫ್ ಹಾಜಿ ಕೈಕಾರ, ಕಾರ್ಯದರ್ಶಿ ಯೂಸುಫ್ ಮೈದಾನಿಮೂಲೆ, ಆಶಿಕುದ್ದೀನ್ ಅಖ್ತರ್, ಪದವಿವಿಭಾಗದ ಪ್ರಾಂಶುಪಾಲರಾದ ಮುಹಮ್ಮದ್ ಮನ್ಸೂರ್, ಪದವಿಪೂರ್ವ ವಿಭಾಗದ ಪ್ರಾಂಶುಪಾಲರಾದ ಸಂಧ್ಯಾ ಪಿ, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಶಬ್ನಾ ಉಪಸ್ಥಿತರಿದ್ದರು.
ಕಳೆದ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮತ್ತು ಆಟೋಟ ಸ್ಪರ್ಧೆಯಲ್ಲಿ ಶ್ರೇಣಿ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪದವಿ ವಿಭಾಗದ ವಿದ್ಯಾರ್ಥಿನಿಯರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.