ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮೇ.20ರಂದು ಬೆಳಿಗ್ಗೆ ಕೆಎಸ್ಆರ್ಟಿಸಿ ಅಶ್ವಮೇಧ ಬಸ್ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದ್ದು, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮೇ.18ರಂದು ಬಸ್ಸು ಮತ್ತು ಲಾರಿಯ ನಡುವೆ ಢಿಕ್ಕಿ
ಎರಡು ದಿನಗಳ ಹಿಂದೆಯೂ ಇದೇ ರೀತಿ ಕೆಎಸ್ಆರ್ಟಿಸಿ ಬಸ್ಸು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಜೆ ನಡೆದಿತ್ತು. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ತಾಸು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ವಾಹನ ಸವಾರರು ಪರದಾಟ ನಡೆಸಿದ ಘಟನೆಯೂ ನಡೆದಿತ್ತು ಈಗ ಅಲ್ಲಿಯೇ ಎರಡು ದಿನಗಳ ಬಳಿಕ ಈ ಘಟನೆ ಉಂಟಾಗಿದೆ.