ಪುತ್ತೂರು: ನೆಹರುನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 37ನೇ ವರ್ಷದ ಮಹಾವಿದ್ಯಾಲಯದ ವಾರ್ಷಿಕೋತ್ಸವ ಮೇ.21ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮಕ್ಕಿಮನೆ ಗಣೇಶಯ್ಯ ಉಮಾ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಕಾರ್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಂದ್ರ ಕಿಣಿ ಜಿ., ಸಂಚಾಲಕ ವಿಜಯನಾರಾಯಣ ಕೆ. ಎಂ., ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ. ರವೀಂದ್ರ, ಪ್ರಾಂಶುಪಾಲೆ ಅಕ್ಷತಾ ಎ.ಪಿ., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀರಕ್ಷಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾರ್ಷಿಕ ಸಂಚಿಕೆ ‘ವಿವೇಕ’ ಬಿಡುಗಡೆಯಾಗಲಿದೆ. ಜೊತೆಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ನಡೆಸಿದ ಪರೀಕ್ಷೆಯಲ್ಲಿ ರಾಂಕ್ ಪಡೆದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ಸಾಧಕ ವಿದ್ಯಾರ್ಥಿನಿ ಬಿ. ಪೂರ್ಣಿಮಾ ಅವರಿಗೆ ಸನ್ಮಾನ ನಡೆಯಲಿದೆ.
ಮೇ.22ರಂದು ಲೀಗಮ್ ಫೆಸ್ಟ್ 3.0 ಸಮಾರೋಪ ಸಮಾರಂಭ, ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ:
ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಮೇ.22ರಂದು ಲೀಗಮ್ ಫೆಸ್ಟ್ 3.0 ಸಮಾರೋಪ ಸಮಾರಂಭ, ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ, ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯದೀಶ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಯು. ಎಸ್. ನಾಗರಾಜ್ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.