ಪುತ್ತೂರು: ಸೈಬರ್ ಕ್ರೈಂ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ಮೇ.21ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಪುತ್ತೂರು ಪುರಭವನದಲ್ಲಿ ಪೊಲೀಸ್ ಇಲಾಖೆಯಿಂದ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ಸೈಬರ್ ಅಪರಾಧ ಪ್ರಕರಣಗಳನ್ನು ಅರ್ಥಮಾಡಿಕೊಳ್ಳುವುದು, ಹ್ಯಾಕರ್‌ಗಳು/ಸೈಬರ್ ಅಪರಾಧಿಗಳು ಸೈಬರ್ ಅಪರಾಧಗಳನ್ನು ಹೇಗೆ ಮಾಡುತ್ತಾರೆ ಮತ್ತು ಸೈಬರ್ ಅಪರಾಧಕ್ಕೆ ಬಲಿಯಾಗದಂತೆ ನಿಮ್ಮನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದನ್ನು ಸಾರ್ವಜನಿಕರು ಅರಿಯಬೇಕೆಂದು ಪೊಲೀಸ್ ಇಲಾಖೆ ಕಾರ್ಯಾಗಾರ ನಡೆಸುತ್ತಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.