ಮೇ.22: ಬೆಟ್ಟಂಪಾಡಿ ಕಾಲೇಜಿನಲ್ಲಿ ಪುತ್ತೂರು/ಸುಳ್ಯ ವಲಯ ಮಟ್ಟದ ಅಂತರ್ ಕಾಲೇಜ್ ಎನ್ಎಸ್ಎಸ್ ಫೆಸ್ಟ್

0

ಪುತ್ತೂರು: 2024-25 ರ ಸಾಲಿನ ಪುತ್ತೂರು/ಸುಳ್ಯ ವಲಯ ಮಟ್ಟದ ಅಂತರ್ ಕಾಲೇಜ್ ಎನ್ಎಸ್ಎಸ್ ಫೆಸ್ಟ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಮೇ.22 ರಂದು ನಡೆಯಲಿದೆ.


ಈ ಫೆಸ್ಟ್ ಗೆ ‘ಸಮನ್ವಯ’ ಎಂದು ನಾಮಕರಣ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು / ಸುಳ್ಯ ವಲಯದಲ್ಲಿರುವ ಸರಿಸುಮಾರು 10 ಕ್ಕೂ ಹೆಚ್ಚು ಕಾಲೇಜುಗಳಿಂದ 150 ಕ್ಕೂ ಹೆಚ್ಚಿನ ಸ್ವಯಂಸೇವಕರು ಭಾಗವಹಿಸುವ ನಿರೀಕ್ಷೆ ಇದೆ.


ಈ ಫೆಸ್ಟ್ ನಲ್ಲಿ 5 ಬಗೆಯ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಇದರ ಉದ್ಘಾಟನಾ ಸಮಾರಂಭವು 22 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದ್ದು , ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರು , ಮಂಗಳೂರು ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಸೇರಿದಂತೆ ವಿವಿಧ ಗಣ್ಯರಿಂದ ಈ ಕಾರ್ಯಕ್ರಮವು ನಡೆಯಲಿದೆ ಎಂದು ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here