ಕನ್ನಡಕ್ಕೆ ಒಲಿದ ಮೊದಲ ಪುರಸ್ಕಾರ – ಹಿರಿಯ ಲೇಖಕಿ ಬಾನು ಮುಷ್ತಾಕ್ ಕೃತಿಗೆ ಬೂಕರ್ ಪ್ರಶಸ್ತಿ

0

ನ್ನಡದ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಬಾನು ಅವರು ಬರೆದಿದ್ದ ಹಸೀನಾ ಮತ್ತು ಇತರ ಕತೆಗಳು ಕೃತಿಯನ್ನ ದೀಪಾ ಭಸ್ತಿ ಇಂಗ್ಲಿಷ್​ಗೆ ಅನುವಾದ ಮಾಡಿದ್ದರು. ಈ ಕೃತಿ ಈಗ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಪಾತ್ರವಾಗಿದೆ.

ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಅವರ ಇಂಗ್ಲಿಷ್ ಅನುವಾದಿತ ಕೃತಿ “ಹಾರ್ಟ್ ಲ್ಯಾಂಪ್” ಶಾರ್ಟ್ ಲಿಸ್ಟ್​ಗೆ ಆಯ್ಕೆಯಾಗಿತ್ತು. ಬೂಕರ್ ಪ್ರಶಸ್ತಿಗಾಗಿ ಲಿಸ್ಟ್ ಆಗಿದ್ದ ಒಟ್ಟು 6 ಕೃತಿಗಳಲ್ಲಿ ಅಂತಿಮವಾಗಿ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರ ಕೃತಿ ಪ್ರಶಸ್ತಿಗೆ ಭಾಜನವಾಯಿತು.

2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಸಾಹಿತ್ಯಕ್ಕೆ ದೊರೆತ ಮೊದಲ ಬೂಕರ್ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ.

ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿಯು 50 ಸಾವಿರ ಪೌಂಡ್ ನಗದು ಬಹುಮಾನ ಒಳಗೊಂಡಿದೆ. ಈ ಹಣವನ್ನು ಬಾನು ಮುಷ್ತಾಕ್ ಮತ್ತು ಕೃತಿಯನ್ನು ಇಂಗ್ಲಿಷ್​​ಗೆ ಅನುವಾದಿಸಿದ ದೀಪಾ ಭಸ್ತಿ ಅವರಿಗೆ ಹಂಚಲಾಗಿದೆ.

LEAVE A REPLY

Please enter your comment!
Please enter your name here