ಕಾವು: ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟ ಮಂಗಳೂರು ಇದರ ಚುನಾವಣೆಯಲ್ಲಿ ಪುತ್ತೂರು ಉಪವಿಭಾಗದಿಂದ ಸ್ಪರ್ಧಿಸಿ ನಿರ್ದೇಶಕರುಗಳಾಗಿ ಗೆಲುವು ಸಾಧಿಸಿದ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ ಬಳಜ್ಜ ಮತ್ತು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ನಿಧಿಮುಂಡರವರಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ನೇತೃತ್ವದಲ್ಲಿ ಮೇ.22ರಂದು ಅಪರಾಹ್ನ ಗಂಟೆ 3ಕ್ಕೆ ಕಾವು ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಸಹಕಾರಿ ಬಂಧುಗಳು, ಸಂಘದ ಸದಸ್ಯರುಗಳು, ಗ್ರಾಹಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.