ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ಇಂದು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆಯಾಗಿದ್ದಾರೆ.
ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿ ತದನಂತರ ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.