ಪಠ್ಯಪುಸ್ತಕದಲ್ಲಿ ಸಾಮಾನ್ಯ ಜ್ಞಾನ ಸೇರ್ಪಡೆ ಮಾಡುವಂತೆ ಸುದಾನ ವಿದ್ಯಾರ್ಥಿಯಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ : ಸರಕಾರದ ಅಧಿಕಾರಿಗಳಿಂದ ಪೂರಕ ಸ್ಪಂದನೆ

0

ಪುತ್ತೂರು: ಸ್ಥಳೀಯ ವಿವರಗಳನ್ನು ಒಳಗೊಂಡ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಬೇಕು ಎಂದು ವಿದ್ಯಾರ್ಥಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು ಪತ್ರಕ್ಕೆ ಸರಕಾರದ ಮಟ್ಟದ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ.


ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರಿನ ಎಸ್.ಎ. ರಹಿಮಾನ್ ಅವರ ಪುತ್ರ, ಪುತ್ತೂರು ಸುದಾನ ವಸತಿಯುತ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ 9ನೇ ತರಗತಿಗೆ ಸೇರ್ಪಡೆಗೊಂಡ ಮೊಹಮ್ಮದ್ ರಿಹಾನ್ ಎಂಬವರು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ.


ಸರಕಾರದ ಹಂತದಲ್ಲಿ ಸ್ವೀಕೃತವಾದ ಮನವಿ ಪತ್ರದ ಕೋರಿಕೆ ವಿಷಯವು ಪಠ್ಯ ಪುಸ್ತಕಗಳಲ್ಲಿ ಸೇರ್ಪಡೆ ಮಾಡುವ ಸಂಬಂಧ ಮುಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ನಿರ್ದೇಶಕರು ಪತ್ರ ಬರೆದಿದ್ದಾರೆ. ಶಿಕ್ಷಣ ಇಲಾಖೆ ಆಯುಕ್ತರ ಇಮೇಲ್ ಪತ್ರ ಉಲ್ಲೇಖಿಸಿ, ಕರ್ನಾಟಕ ಪಠ್ಯ ಪುಸ್ತಕ ಸಂಘದ ನಿರ್ದೇಶಕರು ವಿದ್ಯಾರ್ಥಿ ರಿಹಾನ್‌ಗೆ ಪತ್ರ ಬರೆದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಲ್ಲಿ 2005ನೇ ರಾಷ್ಟ್ರೀಯ ಪಠ್ಯ ಕ್ರಮ ಚೌಕಟ್ಟಿನ ಆಧಾರದ ಮೇಲೆ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟಿನಲ್ಲಿ ತಿಳಿಸಿರುವಂತೆ ಪಠ್ಯ ಕ್ರಮ ರಚನೆ ಮಾಡಲಾಗಿದೆ. 6ರಿಂದ 10ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕಗಳನ್ನು ಅವಲೋಕಿಸಿದಾಗ, ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಜ್ಞಾನವೃದ್ಧಿಗಾಗಿ ದಿನ ಪತ್ರಿಕೆಗಳು, ನಿಯತಕಾಲಿಕೆಗಳು, ಗ್ರಂಥಾಲಯಗಳ ಸದ್ಬಳಕೆ ಮಾಡುವಂತೆ ಸಲಹೆ ನೀಡಲಾಗಿದೆ.

ಪತ್ರದಲ್ಲಿನ ಉಲ್ಲೇಖ
ಇತ್ತೀಚೆಗೆ ವಿದೇಶದಿಂದ ಬಂದಿದ್ದ ತನ್ನ ತಂದೆ ಜತೆಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ತಂದೆ ಕೇಳಿದ್ದ ಸಾಮಾನ್ಯ ಜ್ಞಾನದ ಪ್ರಶ್ನೆಗಳಾದ ನಮ್ಮ ಕ್ಷೇತ್ರದ ಶಾಸಕರು, ಜಿಲ್ಲೆಯಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರ ಇತ್ಯಾದಿ ಪ್ರಶ್ನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಉತ್ತರಿಸಲು ಆಗಿರಲಿಲ್ಲ. ನಾನು ಶಾಲೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆಯುತ್ತಿದ್ದರೂ, ಸಾಮಾನ್ಯ ಜ್ಞಾನದ ಕೊರತೆ ಕಾಡುತ್ತಿದೆ. ಆದ್ದರಿಂದ ನಮ್ಮ ಪಠ್ಯಕ್ರಮದಲ್ಲಿ ಸಾಮಾನ್ಯ ಜ್ಞಾನದ ವಿಷಯ ಸೇರಿಸುವುದು ಉತ್ತಮ. ಅದಕ್ಕಾಗಿ ಪಠ್ಯ ಪುಸ್ತಕದಲ್ಲಿ ಕೆಲವು ಪುಟಗಳನ್ನು ಖಾಲಿ ಬಿಡಬೇಕು. ಅಲ್ಲಿ ಆಯಾ ಶಾಲೆ ಶಿಕ್ಷಕರು ಸ್ಥಳೀಯ ಸಾಮಾನ್ಯ ಜ್ಞಾನದ ವಿಷಯಗಳನ್ನು ಬರೆದು ಬೋಽಸಿದರೆ ಉತ್ತಮ. ಈ ವಿಷಯ ಕುರಿತು ರಾಜ್ಯದ ಶಾಲೆಗಳಿಗೆ ಸುತ್ತೋಲೆ ಕಳುಹಿಸಬೇಕು ಎಂದು ಮೊಹಮ್ಮದ್ ರಿಹಾನ್ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರ ಪ್ರತಿಯನ್ನು ಹಿರಿಯ ಅಽಕಾರಿಗಳಿಗೆ ಕಳುಹಿಸಿದ್ದ ಇದಕ್ಕೆ ಅಧಿಕಾರಿಗಳು ಸ್ಪಂದನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here