ಮೀಫ್ ಎಕ್ಸಲೆನ್ಸ್ ಅವಾರ್ಡ್ 2025’ : ಆಯಿಶಾ ಹೆಣ್ಣುಮಕ್ಕಳ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಕಾಲೇಜು ಪುರಸ್ಕಾರ

0

ಮಂಗಳೂರು: ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು 100% ಫಲಿತಾಂಶ ದಾಖಲಿಸಿದ ವಿದ್ಯಾ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ.ಮೋಹನ್ ಆಳ್ವ, ಮೀಫ್ ಇದರ ಗೌರವಾನ್ವಿತ ಅಧ್ಯಕ್ಷರಾದ ಉಮ್ಮರ್ ಟೀಕೆ, ಮುಖ್ಯ ಅತಿಥಿಯಾಗಿ ಬರಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಬಜ್ಪೆ, ಪ್ರೆಸಿಡೆನ್ಸಿ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಸುಹೇಲ್ ಅಹಮದ್ , ಎಚ್ ಪಿ ಆರ್ ವಿದ್ಯಾಸಂಸ್ಥೆ ಮಣಿಪಾಲ್ ಇದರ ಅಧ್ಯಕ್ಷರಾದ ಹರಿಪ್ರಸಾದ್ ರೈ ಮತ್ತಿತರ ಗಣ್ಯರು ಭಾಗವಹಿಸಿದ್ದರು. 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಶಾಲಾ ಕಾಲೇಜುಗಳ ಪೈಕಿ ಶೇ.100 ಫಲಿತಾಂಶ ದಾಖಲಿಸಿದ ‘ಆಯಿಶಾ ಹೆಣ್ಣುಮಕ್ಕಳ ಪ. ಪೂ’ ಕಾಲೇಜಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಮೀಫ್ ಸದಸ್ಯತ್ವ ಪಡೆದ ಪದವಿಪೂರ್ವ ಕಾಲೇಜುಗಳ ಪೈಕಿ ಪಿ.ಯು.ಸಿ. ಬೋರ್ಡ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದು ಆಯಿಶಾ ಹೆಣ್ಣುಮಕ್ಕಳ‌ ಪ. ಪೂ. ಕಾಲೇಜು ದ್ವಿತೀಯ ಬಾರಿಗೆ ಪ್ರಥಮ ‘ಅತ್ಯುತ್ತಮ ಕಾಲೇಜು ಪುರಸ್ಕಾರ’ ವನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here