ಮಂಗಳೂರು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ದ. ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು 100% ಫಲಿತಾಂಶ ದಾಖಲಿಸಿದ ವಿದ್ಯಾ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ಶಾಲಾ ಕಾಲೇಜುಗಳ ಪೈಕಿ ಶೇ.100 ಫಲಿತಾಂಶ ದಾಖಲಿಸಿದ ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ನಿರ್ವಹಣಾ ಕಾಲೇಜ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.