ಪುತ್ತೂರು: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅರಿಯಡ್ಕ ಗ್ರಾಮದ ಪಾಪೆಮಜಲು ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.
ಇತ್ತೀಚೆಗೆ ಫಲಿತಾಂಶ ಪ್ರಕಟಗೊಂಡಾಗ ಓರ್ವ ವಿದ್ಯಾರ್ಥಿ ಅನುತ್ತೀರ್ಣಗೊಂಡಿದ್ದು ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸುವ ಮೂಲಕ ಆ ವಿದ್ಯಾರ್ಥಿ ಉತ್ತೀರ್ಣಗೊಂಡ ಪರಿಣಾಮ ಶಾಲೆ 100.ಶೇ ಫಲಿತಾಂಶ ಪಡೆದುಕೊಂಡಿದೆ ಎಂದು ಶಾಲಾ ಮುಖ್ಯಗುರು ಬಿ ಮೋನಪ್ಪ ಪೂಜಾರಿ, ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.