ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪುತ್ತೂರು ಸತತ 2ನೇ ಬಾರಿಗೆ ಜಿಲ್ಲೆಯಲ್ಲಿ ಪ್ರಥಮ – ಮುಖ್ಯ ಶಿಕ್ಷಕರ ಸಂಘದಿಂದ ಬಿಇಓ, ನೋಡೆಲ್ ಅಧಿಕಾರಿಗೆ ಸನ್ಮಾನ

0

ಪುತ್ತೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ದ.ಕ ಜಿಲ್ಲೆಯಲ್ಲಿ ಪುತ್ತೂರು ತಾಲೂಕು ಸತತ ಎರಡನೇ ಬಾರಿ ಪ್ರಥಮ ಹಾಗೂ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಅತ್ಯುತ್ತಮ ಸಾಧನೆಯಾಗಿದೆ.ಈ ನಿಟ್ಟಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾಲೂಕು ನೋಡೆಲ್ ಅಧಿಕಾರಿ ಹರಿಪ್ರಸಾದ ಎಂ ಇವರನ್ನು ಸನ್ಮಾನಿಸಲಾಯಿತು.


ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಸಂತ ಮೂಲ್ಯ, ಉಪಾಧ್ಯಕ್ಷ ಮೋನಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ ಎ, ಜತೆ ಕಾರ್ಯದರ್ಶಿ ರೋಝ್ಲಿನಾ ಫ್ಲೇವಿ ಲೋಬೋ, ಕೋಶಾಧಿಕಾರಿ ಮ್ಯಾಕ್ಸಿಮ್ ಡಿ’ಸೋಜ, ಕಾರ್ಯಕಾರಿ ಸಮಿತಿ ಸದಸ್ಯೆ ಜಲಜಾಕ್ಷಿಯವರು ಸನ್ಮಾನಿಸಿ, ಗೌರವಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ವ್ಯವಸ್ಥಾಪಕ ಶ್ಯಾಮ್‌ಪ್ರಸಾದ್, ಕಚೇರಿ ಅಧೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here