ಪುತ್ತೂರು ಮಹಿಳಾ ಪೊಲೀಸ್ ಠಾಣಾ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ: ಡಿಜಿಪಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕೆ ಜಾಗ ಮತ್ತು ಅನುದಾನವನ್ನು ಸರಕಾರ ಮಂಜೂರು ಮಾಡಿದ್ದು ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರವೇ ಆಗಬೇಕು ಎಂದು ಕರ್ನಾಟಕ ರಾಜ್ಯದ ನೂತನ ಡಿಜಿಪಿ ಡಾ. ಸಲೀಂ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಈಗ ಇರುವ ಮಹಿಳಾ ಪೊಲೀಸ್ ಠಾಣಾ ಕಟ್ಟಡವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯಾಪ್ತಿಗೊಳಪಟ್ಟಿದ್ದು ದೇವಸ್ಥಾನದ ಅಭಿವೃದ್ದಿ ಕಾರ್ಯಗಳಿಗಾಗಿ ಅದನ್ನು ತೆರವುಗೊಳಿಸಲಾಗುತ್ತದೆ. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನೂತನ ಮಹಿಳಾ ಠಾಣೆ ನಿರ್ಮಾಣವಾಗಲಿದ್ದು ಇದಕ್ಕೆ ಕಂದಾಯ ಇಲಾಖೆಯಿಂದ 8 ಸೆಂಟ್ಸ್ ಜಾಗವನ್ನು ಮಂಜೂರು ಮಾಡಲಾಗಿದೆ ಮತ್ತು ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನವೂ ಬಿಡುಗಡೆಯಾಗಿದೆ. ಟೆಂಡರ್ ಕರೆದು ಕಾಮಗಾರಿ ಶೀಘ್ರ ಪ್ರಾರಂಭ ಮಾಡುವಲ್ಲಿ ಕ್ರಮ ವಹಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here