ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ.
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ದ್ವಿತೀಯ ಪಿಯು ಪರೀಕ್ಷೆ-1 ಮತ್ತು ಪರೀಕ್ಷೆ-2, ಸಿಬಿಎಸ್‌ಇ, ಐಸಿಎಸ್‌ಇ ಫಲಿತಾಂಶ ಪ್ರಕಟವಾಗಿದ್ದು,ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು.ಅವರಲ್ಲಿ ಹೆಚ್ಚಿನವರು ಕೇರಳದ ವಿದ್ಯಾರ್ಥಿಗಳು.ಈ ವಿದ್ಯಾರ್ಥಿಗಳ ಪಿಯು ಫಲಿತಾಂಶವನ್ನು ಕೇರಳ ಪದವಿಪೂರ್ವ ಶಿಕ್ಷಣ ಇಲಾಖೆ ಮೇ 21ರಂದು ಪ್ರಕಟಿಸಿತ್ತು. ಮೇ23ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.ತಾಂತ್ರಿಕ ಕಾರಣಗಳಿಂದ ಒಂದು ದಿನ ಮುಂದೂಡಲಾಗಿದ್ದು, ಮೇ 24ರಂದು ಮಧ್ಯಾಹ್ನದ ಒಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದರು.
ಫಲಿತಾಂಶ ವೀಕ್ಷಣೆಯ ಅಧಿಕೃತ ವೆಬ್‌ಸೈಟ್: cetonline.karnataka.gov.inkea.kar.nic.in