ಪುತ್ತೂರು: 2024 -25 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಶೇಕಡ 100 ಫಲಿತಾಂಶ ಪಡೆದುಕೊಂಡಿದೆ.
ಇತ್ತೀಚೆಗೆ ಫಲಿತಾಂಶ ಪ್ರಕಟಗೊಂಡಾಗ ಓರ್ವ ವಿದ್ಯಾರ್ಥಿ ಅನುತ್ತೀರ್ಣಗೊಂಡಿದ್ದು ,ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಗಳಿಸುವ ಮೂಲಕ ಆ ವಿದ್ಯಾರ್ಥಿ ಉತ್ತೀರ್ಣಗೊಂಡ ಪರಿಣಾಮ ಶಾಲೆ ಪ್ರಪ್ರಥಮ ಬಾರಿಗೆ ನೂರು ಶೇಕಡಾ ಫಲಿತಾಂಶ ಪಡೆದುಕೊಂಡಿದೆ. ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಸ್ವರ್ಣ ಮಹೋತ್ಸವದ ಸಂದರ್ಭದಲ್ಲಿ ಈ ಸಾಧನೆಗೈದುದು ಹರ್ಷ ತಂದಿದೆ ಎಂಬುದಾಗಿ ಶಾಲಾ ಮುಖ್ಯ ಗುರುಗಳು ಮತ್ತು ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ.