ರಾಜ್ಯದಲ್ಲಿ ಕೋವಿಡ್ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

0

ಪುತ್ತೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.

LEAVE A REPLY

Please enter your comment!
Please enter your name here