ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕುಡಾಲ-ಅರಿಮಜಲುಗೆ ರಸ್ತೆಯ ಅಭಿವೃದ್ಧಿಗೆ 2023-24ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಮಂಜೂರಾದ ರೂ.5 ಲಕ್ಷ ಅನುದಾನದಲ್ಲಿ ನಡೆದ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮೇ 24ರಂದು ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಅವರು ತೆಂಗಿನಕಾಯಿ ಒಡೆದು ರಸ್ತೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯಕರ ಹಾಗೂ ಸುರಕ್ಷಿತ ಸಂಚಾರದ ದೃಷ್ಟಿಯಿಂದ ಈ ರಸ್ತೆಯನ್ನು ನಿರ್ಮಿಸಲಾಗಿದೆ. ಈ ರಸ್ತೆ ಮುಂದಿನ ದಿನಗಳಲ್ಲಿ ಜನರ ಸಂಚಾರಕ್ಕೆ ಅನುಕೂಲವಾಗಲಿ ಎಂದು ಹೇಳಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಇಚ್ಲಂಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿವ್ಯೇಶ ಕಲ್ಯ, ಗುತ್ತಿಗೆದಾರ ವಿನೋದ್, ಸಂದೇಶ್ ಹಾಗೂ ರಸ್ತೆ ಬಳಕೆದಾರರು ಉಪಸ್ಥಿತರಿದ್ದರು. ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಸ್ವಾಗತಿಸಿ ವಂದಿಸಿದರು.