ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ “ಶಿವಂ” ಸಭಾಭವನದ ಪ್ರವೇಶೋತ್ಸವ

0

ಉಪ್ಪಿನಂಗಡಿ: ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ “ಶಿವಂ” ಸಭಾಭವನದ ಪ್ರವೇಶೋತ್ಸವು ಬ್ರಹ್ಮಶ್ರೀ ವೇದಮೂರ್ತಿ ಕುಡುಪು ನರಸಿಂಹ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ವಿಶೇಷವಾಗಿ ಶತ ರುದ್ರಪಾರಾಯಣ, ರುದ್ರಾಭಿಷೇಕ, ರುದ್ರಹೋಮ ಹಾಗೂ ರಾತ್ರಿ ರಂಗ ಪೂಜೆ ನಡೆಯಿತು. ಹನುಮಗಿರಿಯ ಕೊದಂಡರಾಮ ಮೇಳದವರಿಂದ ‘ಸಾಕೇತ ಸಾಮ್ರಾಜ್ಞೆ’ ಯಕ್ಷಗಾನ ಬಯಲಾಟ ನಡೆಯಿತು.

ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಹಾಗೂ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಗಮಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ಕಡೆಂಜಿ, ಸುಳ್ಯದ ಹರೀಶ್ ಕಜಿಂಪಿಲಿ, ಶರವೂರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಹೇಮಂತ ರೈ, ಶರವೂರು ದೇವಸ್ಥಾನ ಸಮಿತಿ ಸದಸ್ಯರಾದ ಪರಾರಿ ರಾಮಕೃಷ್ಣ ರೈ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಅಸ್ರಣ್ಣ ಮತ್ತಿತರರು ಆಗಮಿಸಿದರು.

LEAVE A REPLY

Please enter your comment!
Please enter your name here