ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆಯ ಸತ್ತಿಕಲ್ಲು ಪೆಟ್ರೋಲ್ ಪಂಪ್ ಎಂಬಲ್ಲಿ ಸುರಿಯುತ್ತಿದ್ದ ಭಾರೀ ಮಳೆಯ ವೇಳೆ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಒಂದು ಡಿವೈಡರ್ ಮೇಲೆ ಮಗುಚಿ ಬಿದ್ದರೆ, ಇನ್ನೊಂದು ಮತ್ತೊಂದು ಪಾರ್ಶ್ವಕ್ಕೆ ತಿರುಗಿ ನಿಂತ ಘಟನೆ ಮೇ.25ರಂದು ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದ್ದು, ಪುತ್ತೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.