ಆಲಂತಾಯ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಗಿರಿಯಪ್ಪ ಬೋರ್ಜಾಲು ನಿಧನ

0

ನೆಲ್ಯಾಡಿ: ಕಡಬ ತಾಲೂಕಿನ ಆಲಂತಾಯ ಗ್ರಾಮದ ಬೋರ್ಜಾಲು ನಿವಾಸಿ, ಆಲಂತಾಯ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಗಿರಿಯಪ್ಪ ಬೋರ್ಜಾಲು(38ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.24ರಂದು ಬೆಳಿಗ್ಗೆ ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಗಿರಿಯಪ್ಪ ಅವರು ರಿಕ್ಷಾ ಬಾಡಿಗೆಗೆ ಹಾಗೂ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಾಗಿ ದುಡಿಯತ್ತಿದ್ದರು. ಸುಮಾರು 25 ದಿನದ ಹಿಂದೆ ಕರುಳಿನ ಸಮಸ್ಯೆಯಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆಗಾಗಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಮೇ.24ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ರಾಜನ್ ಫ್ರೆಂಡ್ಸ್ ಆಲಂತಾಯ ಇದರ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ಜೋಗಿ ಮುಗೇರ, ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here