ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಣಿ ಕರ್ನಾಟಕ ಪ್ರೌಢ ಶಾಲಾ ಸಂಚಾಲಕರಾದ ಹಾಜಿ ಇಬ್ರಾಹಿಂ,, ಗ್ರಾಮ ಪಂಚಾಯತ್ ಸದಸ್ಯರಾದ ಮೆಲ್ವಿನ್ ಡಿಸೋಜ, ಕರ್ನಾಟಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಚೆನ್ನಪ್ಪ ಗೌಡ, ಯೋಜನಾಧಿಕಾರಿಗಳಾದ ಸುರೇಶ್ ಗೌಡ, ಮಾಣಿ ವಲಯಾಧ್ಯಕ್ಷರಾದ ಸುಧಾಕರ ಸಪಲ್ಯ ,ಮಾಣಿ ಒಕ್ಕೂಟದ ಅಧ್ಯಕ್ಷರಾದ ಮಂಜಪ್ಪ ನಾಯ್ಕ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ, ಶ್ರೀ ಗಣೇಶ ಸಂಘಗಳನ್ನು ಉತ್ತಮ ಸಂಘ ಗಳೆಂದು ಗುರುತಿಸಿ ಅಭಿನಂದಿಸಲಾಯಿತು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಅಭಿನಂದಿಸಲಾಯಿತು.ನಿಕಟ ಪೂರ್ವ ಅಧ್ಯಕ್ಷರುಗಳನ್ನು ಅಭಿನಂದಿಸಲಾಯಿತು. ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಪ್ರಾಸ್ತಾವಿಕ ಮಾತನಾಡಿದರು. ಸೇವಾ ಪ್ರತಿನಿಧಿ ಲಾಯ್ಲಾಬಿ ವರದಿ ಮಂಡಿಸಿ, ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿ, ಸುಜಾತಾ ಸ್ವಾಗತಿಸಿದರು ಶಶಿಕಲಾ ವಂದಿಸಿದರು.