ಪುತ್ತೂರು:ದ.ಕ.ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ.ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿರುವುದರಿಂದ ಮೇ 28ರವರೆಗೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ.
ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ, ಸಿಬಿಎಸ್‌ಇ, ಪದವಿ ಪೂರ್ವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ 27 ಮತ್ತು 28ರಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಲ್ಲೈ ಮುಹಿಲನ್ ಎಂ.ಪಿ.ಅವರು ಆದೇಶಿಸಿದ್ದಾರೆ.